Shramadana for cleanliness at Haveri Zilla Panchayat office under Swachhata Hi Seva 2026
ಜಿಲ್ಲೆಯ ಸುದ್ದಿಹಾವೇರಿ

ಸ್ವಚ್ಛತೆಗಾಗಿ ಶ್ರಮದಾನ

· News Haveri

ಹಾವೇರಿ : ಸ್ವಚ್ಛ ಭಾರತ್ ಮಿಷನ್, ಗ್ರಾಮೀಣ ಸ್ವಚ್ಛತಾ ಹೀ ಸೇವಾ -2026 ರ ಅಂಗವಾಗಿ ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಸ್ವಚ್ಛತೆಗಾಗಿ ಶ್ರಮದಾನದ ಮೂಲಕ ಜಿಪಂ ಕಚೇರಿ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಲ್ಜೀತ್‌ಕುಮಾರ್ ಪಾಲ್ಗೊಂಡು ಶ್ರಮದಾನ ಮಾಡಿದರು. ಈ ವೇಳೆ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಗ್ರಾಮಗಳಲ್ಲಿ ಸ್ವಚ್ಛತೆಯ ಶ್ರಮದಾನ, ಸ್ವಚ್ಛತೆಯ ಅರಿವು ಮೂಡಿಸಲು ಶಾಲೆಗಳಲ್ಲಿ ರಸ ಪ್ರಶ್ನೆ ಕಾರ್ಯಕ್ರಮ, ಚಿತ್ರಕಲೆ ಸ್ಪರ್ಧೇ ಹಾಗೂ ಸ್ವಚ್ಛ ವಾಹಿನಿ ವಾಹನ ಚಾಲಕಿಯರು, ಸಹಾಯಕಿಯರಿಗೆ, ಸ್ವಚ್ಛತಾಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ನಂತರ ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ನಂತರ ಸ್ವಚ್ಛತೆಯ ಅರಿವು, ನಿರುಪಯುಕ್ತ ವಸ್ತುಗಳ ಬಳಕೆ ಹಾಗೂ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು ಮಾಹಿತಿ ನೀಡಲಾಯಿತು. ನಂತರ ಸ್ವಚ್ಛತೆ ಪಾಲನೆಯಯ ಕುರಿತು ಎಲ್ಲರೂ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನ, ಜಿಪಂ ಉಪಕಾರ್ಯದರ್ಶಿ ಡಾ.ಪುನಿತ್ ಬಿ.ಆರ್, ಮುಖ್ಯ ಯೋಜನಾಧಿಕಾರಿ ಎಚ್.ವೈ. ಮೀಸಿ, ಮುಖ್ಯ ಲೆಕ್ಕಾಧಿಕಾರಿ ವಸಂತ ಕುಮಾರ ಹಾಗೂ ಕಛೇರಿಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯ ಜಿಲ್ಲಾ ಸಂಯೋಜಕರುಗಳು ಪಾಲ್ಗೊಂಡಿದ್ದರು.